ಯಲ್ಲಾಪುರ : ಚಲಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಸುಟ್ಟು ಭಸ್ಮವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಬಳಿ ಸಂಭವಿಸಿದೆ

ಸಣ್ಣಪುಟ್ಟ ಸಾಮಗ್ರಿಗಳನ್ನ ತುಂಬಿಕೊಂಡು ಮುಂಬೈನಿಂದ ಎರ್ನಾಕುಲಂ ಗೆ ಸಾಗಿಸುತ್ತಿದ್ದ ವೇಳೆ ಅರಬೈಲ್ ಬಳಿ ಸಾಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ.

ಇನ್ನೂ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲಿನರ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.