ಹಳಿಯಾಳ : ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಯೂರ ಜಯಕುಮಾರ ಚಾಲನೆ ನೀಡಿದ್ದರು.
ಪಟ್ಟಣದ
ಹಳಿಯಾಳದ ಎಪಿಎಂಸಿ ಸಮೀಪದ ಚಂದಾವನ ಆವರಣದಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಚಾಲನ ನೀಡಿದ್ದರು. ಇದೇ ಮೊದಲ ಬಾರಿಗೆ ಜಿಲ್ಲೆಗೆ ಸುರ್ಜೆವಾಲಾ ಭೇಟಿ ನೀಡಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಾಯೋಗಿಕವಾಗಿ ಫಲಾನುಭವಿಗಳಿಗೆ ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್ ನಲಪಾಡ್, ಮಾಜಿ ಶಾಸಕರು, ಮುಖಂಡರು ಭಾಗವಹಿಸಿದ್ದಾರೆ.
ಜಿಲ್ಲೆಯ ವಿವಿಧ ತಾಲ್ಲೂಕುಗಳ ಕಾಂಗ್ರೆಸ್ ಜನಪ್ರತಿನಿಧಿಗಳು, ನೂರಾರು ಕಾರ್ಯಕರ್ತರು ಭಾಗಿ