ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ 09 ರಿಂದ 29 ರ ವರೆಗೆ ನಡೆಯಲಿದ್ದು, ವಾಕರಸಾ ಸಂಸ್ಥೆಯು ಧಾರವಾಡ, ಕಾರವಾರ, ಬಾಗಲಕೋಟೆ, ಹಾವೇರಿ ಬೆಳಗಾವಿ ಮತ್ತು ಗದಗ ಭಾಗಗಳಲ್ಲಿ ಪರೀಕ್ಷೆಗಳಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಬೇರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಈ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ
ವಾಸಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.