ಮುಂಡಗೋಡ : ಜಾತ್ರೆಗೆ ಹೋಗಿ ಬರುತ್ತಿದ್ದ ಐ 20ಕಾರ್ ಅಪಘಾತಕ್ಕೆ ಒಳಗಾಗಿ ಮೂವರು ಮೃತಪಟ್ಟಿರುವ ಘಟನೆ ಪಾಳಾ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ್ ಹಾಗೂ ಶಂಕರಯ್ಯ ಹಿರೇಮಠ ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೆ ಸಾವನ್ನಲ್ಪಿದ್ದರು. ಇನ್ನೊರ್ವನಿಗೆ ಗಂಭೀರವಾಗಿ ಗಾಯವಾಗಿರುವ ಕಾರಣ ಹುಬ್ಬಳ್ಳಿ ಕಿಮ್ಸ್ ಗೆ ಕರೆದೊಯ್ಯಲಾಗಿತ್ತು. ಈ ವೇಳೆ ಆತ ಮೃತಪಟ್ಟಿದ್ದಾನೆ.

ಪಾಳಾ ಗ್ರಾಮದಲ್ಲಿ ನಡೆಯತ್ತಿದ್ದ ಮಾರಿಕಾಂಬಾ ದೇವಿಯ ಜಾತ್ರೆಗೆ ಹೋಗುತ್ತ ವೇಳೆ ಕಾರ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಂದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರನಲ್ಲಿ ಇದ್ದವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಅಪಘಾತದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.