ಮುಂಡಗೋಡ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರೂ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪಾಳಾ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಪಟ್ಟಣದ ಬಸವನಬೀದಿಯ ಗಣೇಶ ಗಾಣಿಗೇರ ಹಾಗೂ ಮಹೇಶ ಗಾಣಿಗೇರ ಎಂಬುವವರೆ ಮೃತ ದುರ್ದೈವಿಗಳಾಗಿದ್ದಾರೆ. ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ.

ಪಾಳಾ ಗ್ರಾಮದಲ್ಲಿ ನಡೆಯುತ್ತಿದ್ದ ಮಾರಿಕಾಂಬಾ ದೇವಿಯ ಜಾತ್ರೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾರ ರಸ್ತೆ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮವಾಗಿ ಇಬ್ಬರೂ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರಗಾಯವಾಗಿದೆ.

ಅಪಘಾತದಲ್ಲಿ ಗಾಯಗೊಂಡ ಮೂವರನ್ನ ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಇನ್ನೂ ಅಪಘಾತದದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..