ಕಾರವಾರ : ಉತ್ತರಕನ್ನಡ ಜಿಲ್ಲೆಯ ಕುಮಟಾಕ್ಕೆ ಮಾರ್ಚ್ 15ರಂದು ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಆಗಮಿಸುವ ಸಾಧ್ಯತೆ ಇದೆ, ಈ ಹಿನ್ನಲೆಯಲ್ಲಿ ಆಗಮನದ ಸಿದ್ದತೆಗಾಗಿ ಜಿಲ್ಲಾಧಿಕಾರಿ ಅವರು ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ.
ಈಗಾಗಲೆ ಸರಕಾರ ಕುಮಟಾದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಜಾಗ ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಆಸ್ಪತ್ರೆ ನಿರ್ಮಾಣದ ಅಡಿಗಲ್ಲು ಹಾಕಲು ಮತ್ತು ಪಟ್ಟಣದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧ ಉಧ್ಘಾಟನೆಗಾಗಿ ಸಿ ಎಂ ಕುಮಟಾಕ್ಕೆ ಆಗಮಿಸಿವ ಸಾಧ್ಯತೆ ಇದೆ.
ಈ ಹಿನ್ನಲೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಳಿಕಟ್ಟಿ ಅವರು ಸಭೆಯನ್ನ ನಡೆಸಿದ್ದು, ಸಿ ಎಂ ಆಗಮನದ ಹಿನ್ನಲೆಯಲ್ಲಿ ಎಲ್ಲಾಸಿದ್ದತೆಯನ್ನ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.