ಭಟ್ಕಳ: ತಾಲೂಕಿನ ಮದೀನ ಗ್ರೌಂಡ್ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಮಾದಕ ವಸ್ತು ಸೇವನೆ ಮಾಡಿ ತುರಾಡುತ್ತಿದ್ದ ನಾಲ್ವರು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು  ಮಸೂದ್ ಅಲಿಯಾಸ್ ಮಕ್ಸೂದ್, ಅಬ್ದುಲ್ ಮುನಾಫ್, ವಿಲಾಸ್ ಲಕ್ಷ್ಮಣ ಹಾಗೂ ವಿಶಾಲ್ ಮೊಗೇರ ಎಂದು ತಿಳಿದು ಬಂದಿದೆ.

ಇವರು ತಾಲೂಕಿನ ಮದೀನ ಗ್ರೌಂಡ್ಸ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಮಾದಕ ವಸ್ತು ಸೇವನೆ ಮಾಡಿ ತುರಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ವೇಳೆ
ಅನುಮಾನಗೊಂಡ ಪೊಲೀಸರು ವಿಚಾರಣೆ ಮಾಡಿದ ವೇಳೆ ಆರೋಪಿಯ ಬಾಯಿಯಲ್ಲಿ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ವೇಳೆ ಗಾಂಜಾ ಸೇವನೆ ಮಾಡಿರುವುದು ಖಚಿತವಾಗಿದೆ.

ನಂತರ ಎನ್.ಡಿ.ಪಿ.ಎಸ್ ಕಾಯ್ದೆಯಡಿ ನಾಲ್ವರು ಆರೋಪಿಯನ್ನು ಪೊಲೀಸರು  ಬಂಧಿಸಿದ್ದಾರೆ.

ಈ ಬಗ್ಗೆ ಗ್ರಾಮೀಣ ಠಾಣೆ ಪಿ.ಎಸ್.ಐ ಮಯೂರ್ ಪಟ್ಟಣ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ  ಎ. ಎಸ್.ಐ ಕೃಷ್ಣ .ಸಿ ನಾಯ್ಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ