ಕುಮಟ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆ ಆಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರ್ಮಾಣದ ಕನಸು ಈಗ ನನಸಾಗುವ ಹಂತಕ್ಕೆ ಬಂದಿದೆ. ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಮಂಜೂರಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ವೆ ನಂ. 440ರಲ್ಲಿ 15.35 ಎಕರೆ ಜಾಗ ಮೀಸಲು ಇಡಲಾಗಿದೆ. ಇದು ಈ ಹಿಂದೆ ಶಾಲೆಗೆ ಮೀಸಲಿಟ್ಟಿದ್ದ ಜಾಗವಾಗಿತ್ತು. ಆದರೆ ಇದೇ ಜಾಗವನ್ನು ಈಗ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ.
ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ನೀಡಲಾಗಿದ್ದು, ಶಾಲೆ ನಿರ್ಮಾಣಕ್ಕೆ ಪರ್ಯಾಯ ಜಾಗ ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ.