ಕಾರವಾರ: ಚುನಾವಣೆಯ ಅಖಾಡಾ ಜೋರಾಗಿದ್ರೂ ಹಿಂದು ಹುಲಿ.ಸಂಸದ ಅನಂತಕುಮಾರ ಹೆಗಡೆ ಮಾತ್ರ ಸದ್ಯಕ್ಕೆ ಎಲ್ಲಿಯೂ ಕಾಣಿಸಿಕೊಂಡಿಲ್ಲ.ಆಗೊಮ್ಮೆ ಈಗೊಮ್ಮೆ ಬಂದು ಹೋಗಿದ್ದು ಬಿಟ್ಟರೆ ಪಕ್ಷದ ಚುನಾವಣಾ ಪ್ರಚಾರಕ್ಕೆ ಇನ್ನೂ ದುಮುಕಿಲ್ಲ. ಸಂಸದರ ನಡೆ ಈಗ ತೀವ್ರ ಕುತೂಹಲ ಕೆರಳಿಸಿದೆ.
ಪ್ರತಿ ಚುನಾವಣೆಯಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಸಂಸದ ಅನಂತಕುಮಾರ ಹೆಗಡೆ ಸದ್ಯ ಚುನಾವಣಾ ಅಖಾಡಕ್ಕೆ ಇಳಿದಿಲ್ಲ. ಕಳೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕೇಸರಿ ಬಾವುಟ ಹಾರುವಂತೆ ಮಾಡಿದ್ದ ಹಿಂದು ಹುಲಿ ಈ ಬಾರಿಯೂ ತನಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಜವಾಬ್ದಾರಿ ಕೊಟ್ಟಲ್ಲಿ ಸಮರ್ಥವಾಗಿ ನಿರ್ವಹಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಒಂದು ಮೂಲದ ಪ್ರಕಾರ ಟಿಕೇಟ್ ಹಂಚಿಕೆಯಿಂದ ಹಿಡಿದು ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ತನಗೆ ಕೊಟ್ಟಲ್ಲಿ ಇದಕ್ಕೆ ತಾನಂತೂ ರೆಡಿ ಎಂದು ಈಗಾಗಲೇ ಪಕ್ಷದ ಹೈಕಮಾಂಡ್ ಗೆ ತಿಳಿಸಿದ್ದಾರೆ ಅನ್ನುವ ಮಾತು ಕೇಳಿಬಂದಿದೆ.
ಇನ್ನೂ ಉತ್ತರಕನ್ನಡ ಜಿಲ್ಲೆಯಲ್ಲಿ ಈಗಲೂ ಸಂಸದ ಅನಂತಕುಮಾರ ಹೆಗಡೆ ಪವರ್ ಪುಲ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಪಕ್ಷದ ಕೆಲವೊಂದು ಕಾರ್ಯಕ್ರಮದಲ್ಲಿ ಸಂಸದರು ಪಾಲ್ಗೊಂಡಿಲ್ಲ ಅನ್ನೊದು ಬಿಟ್ಟರೆ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರವಿದ್ದಾರೆ ಎನ್ನುವ ಸಂಗತಿ ನೂರಕ್ಕೆ ನೂರು ಸುಳ್ಳಾಗಿದೆ.
ಒಂದು ಮೂಲದ ಪ್ರಕಾರ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಈಗಾಗಲೇ ಉತ್ತರಕನ್ನಡ ಜಿಲ್ಲೆಯ ಜವಾಬ್ದಾರಿ ವಹಿಸಿಕೊಳ್ಳಲು ತಯಾರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಇದಕ್ಕೆ ಸಂಸದ ಅನಂತಕುಮಾರ ಹೆಗಡೆ ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗುತ್ತಿದೆ.
ಜಿಲ್ಲೆಯ ಆರು ವಿಧಾನಸಭಾ ಚುನಾವಣೆಯ ಜವಾಬ್ದಾರಿ ತನಗೆ ವಹಿಸಿದ್ದಲ್ಲಿ ಮಾತ್ರ ಅಖಾಡಕ್ಕೆ ಇಳಿಯೋದಾಗಿ ಸ್ಪಷ್ಟಪಡಿಸಿದ್ದಾರೆ ಎನ್ನುವ ಮಾತು ಈಗ ಕೇಳಿಬರಲಾರಂಬಿಸಿದೆ.
ಇನ್ನೇನು ಚುನಾವಣೆಯ ಟೈಮ್ ನಲ್ಲಿ ಸಂಸದ ಅನಂತಕುಮಾರ ಹೆಗಡೆಯವರು ದೂರವಿರುವುದಕ್ಕೆ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಇನ್ನೂ ಸಂಸದರಿಗೆ ಗ್ರೀನ್ ಸಿಗ್ನಲ್ ನೀಡದೇ ಇರುವುದು ಇನ್ನಷ್ಟು ಆತಂಕ ಹೆಚ್ಚಿಸಿದೆ.