ಬೆಂಗಳೂರು : ಜೀವ ಬೆದರಿಕೆ ಕುರಿತು ಕಾರವಾರ ಅಂಕೋಲಾ‌ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಸಿ ಎಂ ಅವರ ಗಮನಕ್ಕೆ ತಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ಭದ್ರತೆ ನೀಡುವುದಾಗಿ ಸಿ ಎಂ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಅವರು ತಮ್ಮಗೆ ಜೀವ ಬೆದರಿಕೆ ಇರುವ ವಿಚಾರವನ್ನ ಸಿ ಎಂ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿ ಎಂ ಅವರು ಸೂಕ್ತ ಭದ್ರತೆ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನೂ ಕಾರವಾರ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹಾಗೂ ಇತರ ಮಹತ್ವದ ವಿಷಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಾಸಕಿ ರೂಪಾಲಿ ನಾಯ್ಕ ಮಾತುಕತೆ ನಡೆಸಿದರು.

ವಿಧಾನಸೌಧ ಆವರಣದಲ್ಲಿ ಶನಿವಾರ ನಡೆದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರು ಪಾಲ್ಗೊಂಡಿದ್ದರು.

ಇನ್ನೂ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದ ಶಾಸಕರು ತುರ್ತಾಗಿ ಆಗಬೇಕಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹೆಂಜಾ ನಾಯ್ಕ ಸೈನಿಕ ತರಬೇತಿ ಶಾಲೆಯ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಲಕ ಪ್ರಮಾಣ ಪತ್ರವನ್ನು ವಿತರಿಸಿದರು. ಅಲ್ಲದೇ, ಅನೇಕ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣವನ್ನು ವರ್ಗಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.