ಚಾಮರಾಜನಗರ : ಕಾಂಗ್ರೆಸ್ ಮಾಜಿ ಸಂಸದರಾಗಿದ್ದ ಧ್ರುವನಾರಾಯಣ್ ಅವರು ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದ ಧ್ರುವರಾರಾಯಣ ಅವರಿಗೆ 62ವಯಸ್ಸಾಗಿದ್ದು, ದಿಢೀರ ಹೃದಯಾಘಾತದಿಂದ ನಿಧಾನರಾಗಿದ್ದಾರೆ. ಧ್ರುವನಾರಾಯಣ ಇವರು ಹಳೇ ಮೈಸೂರು ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಪಕ್ಷಕ್ಕೆ ಅರ್ಜಿ ಕೂಡ ಸಲ್ಲಿಸಿದ್ದರು. ಎರಡು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿದ್ದವರು ಧ್ರುವನಾರಾಯಣ್

ಇವರು 2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು,2004ರಲ್ಲಿ ನಡೆದ ಚುನಾವಣೆಯಲ್ಲಿ ಇವರು ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದರು.

ಇವರ ನಿಧಾನದಿಂದಾಗಿ ಕಾಂಗ್ರೆಸ್ ಗೆ ಆಘಾಂತವಾಗಿದೆ.ಚುನಾವಣೆ ಹೊಸ್ತಿಲಿನಲ್ಲಿ ಅವರ ನಿಧನದಿಂದಾಗಿ ಪಕ್ಷಕ್ಕೆ ಹಿನ್ನಡೆಯಾದಂತಾಗಿದೆ. ಇನ್ನೂ ಧ್ರುವನಾರಾಯಣ್ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನ ನಾಯಕರು ಸಂತಾಪ ಸೂಚಿಸಿದ್ದಾರೆ.