ಕಾರವಾರ : ಆಧುನಿಕ ಕಾಲದಿಂದಲೂ  ಪುರುಷರಿಗಿಂತ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ ಎಂದು  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯದೀಶ ಡಿ. ಎಸ್  ವಿಜಯಕುಮಾರ ಹೇಳಿದರು.

ನಗರದ ಜಿಲ್ಲಾರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ  ಒಕ್ಕೂಟ ಇವರ ಆಶ್ರಯದಲ್ಲಿ ಆಯೋಜಿಸಿಲಾದ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆಯನ್ನ ಉದ್ಘಾಟಿಸಿ ಮಾತನಾಡಿದರು,

ದೇಶದಲ್ಲಿ ಕಾನೂನು ಮಹಿಳೆಯರಿಗೆ ವಿಶಿಷ್ಟ ಗೌರವ  ಸ್ಥಾನಮಾನ ಮತ್ತು ಸಮಾನ ಹಕ್ಕನ್ನು ನೀಡಿದೆ. ಮಹಿಳೆಯರು ಇಂದು ತಂತ್ರಜ್ಞಾನದ ಬೆಳವಣಿಗೆ ಹಾಗೂ ಇನ್ನಿತರ ಯಾವುದೇ ಕ್ಷೇತ್ರದಲ್ಲಾದರೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು. ಕಾನೂನು ಪಾಲನೆ ಮಾಡದೇ ಇರುವುದರಿಂದ ಅನೇಕ ಮಹಿಳೆಯರು  ದೌರ್ಜನ್ಯ ಕಿರುಕುಳಕ್ಕೆ ಒಳಗಾಗಿದ್ದಾರೆ. ಅಂತವರನ್ನು ಭೇಟಿ ಮಾಡಿ  ನ್ಯಾಯ ಒದಗಿಸುವ ಕಾರ್ಯವನ್ನು ಕಾನೂನು ಸೇವಾ ಪ್ರಾಧಿಕಾರ ಮಾಡುತ್ತಿದೆ. ಹೀಗಾಗಿ ಪೋಷಕರು  ತಮ್ಮ ಮಕ್ಕಳಿಗೆ ಲೈಂಗಿಕ ದೌರ್ಜನಗಳ ಬಗ್ಗೆ  ಅರಿವನ್ನು  ಮೂಡಿಸಲು ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯದಿಶೆ ಹಾಗೂ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ. ರಾಯ್ಕರ್ ,ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ. ಕೆ ಮಾತನಾಡಿದ್ದರು.

2022-23 ನೇ ಸಾಲಿನಲ್ಲಿ ತಾಲೂಕು ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ  ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ  ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಶರದ ನಾಯಕ ಅವರಿಗೆ ಸನ್ಮಾನಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾದ ಪ್ರಧಾನ ಹಿರಿಯ ಸಿವಿಲ್ ನ್ಯಾಯದಿಶೆ ರೇಷ್ಮಾ ರೋದ್ರಿಗೀಸ್, ಜಿಲ್ಲಾ ಆಂತರಿಕ ದೂರು ಸಮಿತಿ ಅಧ್ಯಕ್ಷರಾದ ಹೇಮಲತಾ, ಕ್ರಿಮ್ಸ್ ಅಸೋಸಿಯೇಟ್ ಪ್ರೊಪೆಸರ್ ಮಹಾಲಕ್ಷ್ಮಿ ಕಾರ್ಲವಾಡ, ಸಿ.ಜೆ. ಎಮ್. ವಕೀಲ ರಾಜೇಶ್ವರಿ ವಿ ನಾಯ್ಕ, ಇವರು ಕಾನೂನು ಜಾಗೃತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ , ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶ ಮಂಹಾತೇಶ ಎಸ್. ದರಗದ,  ಪ್ರಗತಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಅಧ್ಯಕ್ಷೆ ಶೋಭಾ ನಾಯ್ಕ,  ಜೆ. ಎಂ.ಎಪ್. ಸಿ. ಸಿವಿಲ್ ನ್ಯಾಯಧೀಶಿ ಅಕ್ಷತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.