ಬೆಳ್ತಂಗಡಿ: ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಎಂಬಲ್ಲಿ ರಾತ್ರಿ ಮನೆಗೆ ನುಗ್ಗಿ ಮನೆಮಂದಿ ಎದುರಿನಲ್ಲೇ ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕರಿಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ
ತಾಲೂಕಿನ ಕೊಯಿಲ ಗ್ರಾಮದ ಹಸೈನಾರ್ (24), ಅಬ್ಬಾಸ್ (30) ಬಂಧಿತ ಆರೋಪಿಗಳಾಗಿದ್ದಾರೆ. ಇವರು 3 ದಿನಗಳಿಂದ ಕರಾಯ ಕೆಲಸ ನಿರ್ವಹಿಸುತ್ತಿದ್ದು, ನೀರು ಕೇಳುವ ನೆಪದಲ್ಲಿ ಬಾಲಕಿ ಮನೆಗೆ ತೆರಳಿದ್ದರು. ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿದ್ದರು. ‘ಈ ನಂಬರ್‌ಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ’ ಎಂದು ಬೆದರಿಕೆಯೊಡ್ಡಿ ಹೋಗಿದ್ದರು.
ಮೊನ್ನೆ ಶನಿವಾರ ರಾತ್ರಿ 8 ಗಂಟೆಯಲ್ಲಿ ಮನೆ ಒಳಗೆ ಪ್ರವೇಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದರು. ಬಾಲಕಿ ಹಾಗೂ ಬಾಲಕಿಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ಅಕ್ಕಪಕ್ಕದ ಮನೆಯವರು ಬಾಲಕಿಯನ್ನ ರಕ್ಷಿಸಿದ್ದಾರೆ. ನಂತರ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.