ಯಲ್ಲಾಪುರ : ಹೆದ್ದಾರಿ ದಾಟುತ್ತಿದ್ದ ಕರಡಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವನ್ನಪ್ಪಿರುವ ಘಟನೆ ಕೋಳಿಕೇರಿಯಲ್ಲಿ ನಡೆದಿದೆ.
ಯಲ್ಲಾಪುರ-ಬಳ್ಳಾರಿ ಹೆದ್ದಾರಿಯಲ್ಲಿ ಬೆಳಗ್ಗಿನ ಜಾವ ಸುಮಾರು 5-30ರ ಸಮಯದಲ್ಲಿ ಕರಡಿ ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಬಂಧಿಸಿದೆ ಎಂದು ಹೇಳಲಾಗಿದೆ. ಮೃತ ಕರಡಿಗೆ 6ರಿಂದ 8ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.
ಕರಡಿ ಸಾವನ್ನಪ್ಪಿರುವ ಸುದ್ದಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಕರಡಿ ದೆಹವನ್ನ ಮರಣೋತ್ತರ ಪರೀಕ್ಷಾಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.