ಬೆಂಗಳೂರು :ವಿವಿಧ ಬೇಡಿಕೆಗಳನ್ನ ಮುಂದಿಟ್ಟು ರಾಜ್ಯಾದ್ಯಂತ ನಾಳೆಯಿಂರ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು. ಮುಂದಿನ ಮೂರು ವಾರಗಳ ಕಾಲ ಸಾರಿಗೆ ನೌಕರರು ಪ್ರತಿಭಟನೆ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ರಾಜ್ಯದಲ್ಲಿನ ಸಾರಿಗೆ ನೌಕರರು ಸರಕಾರಿ ನೌಕರರಿಗೆ ನೀಡಲಾಗುತ್ತಿರುವ ವೇತನವನ್ನ ತಮ್ಮಗೂ ನೀಡಬೇಕು. ಹಾಗೂ ಇನ್ನಿತರ ಬೇಡಿಕೆಗಳನ್ನ ಮುಂದಿಟ್ಟು ನಾಳೆ ಮಾರ್ಚ್ 24 ಶುಕ್ರವಾರದಿಂದ ಸಾರಿಗೆ ನೌಕರರು ರಾಜ್ಯಾದ್ಯಂತ ಈ ಹಿಂದೆ ಮಾಡಿದಂತೆ ಬಸ್ ಸಂಚಾರವನ್ನ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆಗೆ ಸಜ್ಜಾಗಿದ್ದರು.
ಈ ನಡುವೆ ಸಾರಿಗೆ ನೌಕರರು ಪ್ರತಿಭಟನೆಯನ್ಬ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸಿ.ಜೆ ಪ್ರಸನ್ನ, ಬಿ ವರಾಳೆ ಅವರಿದ್ದ ಪೀಠ ಆದೇಶ ಹೊರಡಿಸಿದ್ದು ರಾಜ್ಯದಲ್ಲಿ ಮೂರುವಾರಗಳ ಕಾಲ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.
2021ರಲ್ಲಿ ಸಾರಿಗೆ ನೌಕರರು ಪ್ರತಿಭಟನೆ ಸಮಯದಲ್ಲಿ ಸರಕಾರ ನೌಕರರು ವೇತನವನ್ನ ಅಂದು 15% ಹೆಚ್ಚಳ ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಇದೀಗ ಸಮಾನ ವೇತನಕ್ಕಾಗಿ ನಾಳೆಯಿಂದ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿಯಲು ಮುಂದಾಗಿರುವಂತೆ ಹೈಕೋರ್ಟ್ ಇದೀಗ ಪ್ರತಿಭಟನೆಗೆ ಬ್ರೇಕ್ ಹಾಕಿದೆ.