ಸಿದ್ಧಾಪುರ : ರಾಜ್ಯದಲ್ಲಿ ಇತ್ತಿಚೆಗೆ ಅಕ್ರಮ ಪೋಲೀಸ್ ನೇಮಕಾತಿ ಹಗರಣದಲ್ಲಿ ವಿಚಾರಣೆಗೆ ಒಳಗಾಗಿದ್ದ ವ್ಯಕ್ತಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಾವು ಹೇರೂರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಗಣಪತಿ, ಬಿ, ಭಟ್ (55) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ. ಮೃತರು ನೇಲಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ರಾಜ್ಯದಲ್ಲಿ ನಡೆದ ಅಕ್ರಮ ಪಿಎಸ್ಐ ನೇಮಕಾತಿ ಹಗರಣದಲ್ಲಿ ಇವರನ್ನ ಬೆಂಗಳೂರು ಪೊಲೀಸರು ವಶಕದಕೆ ಪಡೆದು ಕೆಲ ದಿನಗಳ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದರು. ಬಳಿಕ ಅವರು ಊರಲ್ಲೆ ಉಳಿದು ಕೊಂಡಿದ್ದು, ಈಗಲ್ಲೂ ಸಹ ಆಗಾಗ ವಿಚಾರಣೆಗೆ ಹಾಜರಾಗುತ್ತಿದ್ದರು ಎನ್ನಲಾಗಿದೆ.

ಯಾವುದೋ ವಿಚಾರವನ್ನ ಮನಸ್ಸಿಗೆ ಹಚ್ಚಿಕೊಂಡ ಜಿ ಬಿ ಭಟ್ ಅವರು ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ..