ಸುದ್ದಿಬಿಂದು ನ್ಯೂಸ್ ಡೆಸ್ಕ್
ಭಟ್ಕಳ :ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಾನನಗರದಲ್ಲಿ ನಡೆದಿದೆ.

ಈಶ್ವರ ನಾಯ್ಕ (24) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಈತ ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ತನ್ನ ಸಹೋದ್ಯೋಗಿಗೆ ದೂರವಾಣಿ ಕರೆ ಮಾಡಿ ಕೆಲಸಕ್ಕೆ ವಿಳಂಬವಾಗಿ ಬರುವುದಾಗಿ ತಿಳಿಸಿದ್ದ ಎನ್ನಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈತ ಮನೆಯ ಮೇಲ್ಛಾವಣಿಗೆ ನೇಣು ಜಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಆತನ ಆತ್ಮಹತ್ಯೆಗೆ ಇದುವರೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಬಗ್ಗೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.