ಸುದ್ದಿ ಬಿಂದು ನ್ಯೂಸ್ ಡೆಸ್ಕ್
ಕಾರವಾರ : ವಿದ್ಯುತ್ ಕಿಡಿ ತಗುಲಿ ಅರಣ್ಯ ಒಂದರಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ತಾಲೂಕಿನ ಬಿಣಗಾ ಸಮೀಪದ ಅರಣ್ಯದಲ್ಲಿ ನಡೆದಿದೆ.

ಬಿಣಗಾದ ರಾಮನಗರ ಅರಣ್ಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅರಣ್ಯಕ್ಕೆ ಬೆಂಕಿ ತಗುಲಿದ್ದು, ಇದರಿಂದಾಗಿ ಅರಣ್ಯದಲ್ಲಿ ಇದ್ದ ಗಿಡ ಮರಗಳು ಬೆಂಕಿಗೆ ಆಹುತಿಯಾಗುತ್ತಿದೆ.

ಅರಣ್ಯಕ್ಕೆ ಬೆಂಕಿ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿರುವುದರಿಂದ ಅರಣ್ಯಕ್ಕೆ ಬಿದ್ದಿರುವ ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.