ಸುದ್ದಿಬಿಂದು ನ್ಯೂಸ್ ಡೆಸ್ಕ್
ನವದೆಹಲಿ: ಕರ್ನಾಟಕ ರಾಜ್ಯದ 15ನೇ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ಘೋಷಣೆಯಾಗಿದ್ದು. ಮೇ 10 ಮತದಾನ ಮೇ 13ಕ್ಕೆ ಮತ ಏಣಿಕೆ ನಡೆಯಲಿದೆ.ಎಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಮುದ್ರೆ ಒತ್ತಿದೆ.
ಇಂದಿನಿಂದಲೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.
ರಾಜ್ಯದ 224ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೊಷಣೆ ಮಾಡಿದೆ.
ಕರ್ನಾಟಕದಲ್ಲಿ ಒಟ್ಟು 5.21ಕೋಟಿ ಮತದಾರರಿದ್ದಾರೆ.ಮೊದಲಬಾರಿಗೆ 917241 ಮಂದಿ ಮತದಾನ ಮಾಡಲಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಮತದಾರರಿದ್ದಾರೆ. ರಾಜ್ಯದಲ್ಲಿ ಒಟ್ಟು 5.21ಕೋಟಿ ಮತದಾರಿದ್ದು ,2ಕೋಟಿ.62 ಲಕ್ಷ ಯುವಕರು, 2.ಕೋಟಿ 59 ಲಕ್ಷ ಮಹಿಳಾ ಮತದಾರರಿದ್ದಾರೆ.80ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲ್ಲೆ ಮತದಾನಕ್ಕೆ ಅವಕಾಶ.