ಸುದ್ದಿಬಿಂದು ನ್ಯೂಸ್ ಡೆಸ್ಕ್
ಶಿರಸಿ : ಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಲಾರಿಗೆ ಬೆಂಕಿ ಹೊತ್ತಿಕೊಂಡು ನಡುರಸ್ತೆಯಲ್ಲಿ ಲಾರಿ ಸುಟ್ಟು ಭಸ್ಮವಾಗಿರುವ ಘಟನೆ. ಬಿಸಲಕೊಪ್ಪ ಬಳಿ ನಡೆದಿದೆ.
ಲಾರಿಯಲ್ಲಿ ಒಣಹುಲ್ಲು ತುಂಬಿಕೊಂಡು ಹೋಗುತ್ತಿದ್ದ ವೇಳೆ ದಾಸನಕೊಪ್ಪ ರಂಗಾಪುರದಿಂದ ಒಣ್ಣ ಹುಲ್ಲು ಸಾಗಿಸಸುವ ವೇಳೆ ರಸ್ತೆಯ ರಸ್ತೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ತಗುಲಿದೆ. ಇದರಿಂದಾಗಿ ಬೆಂಕಿಯ ಕಿಡಿ ಲಾರಿಯಲ್ಲಿದ್ದ ಒಣ್ಣ ಹುಲ್ಲಿಗೆ ಹತ್ತಿಕೊಂಡು ಲಾರಿ ಹಾಗೂ ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಲಾರಿಗೆ ಹೊತ್ತಿಕೊಂಡ ಬೆಂಕಿಯನ್ನ ನಂದಿಸಲು ಹರಸಾಹಸ ಪಟ್ಟಿದ್ದಾರೆ.ಆದರೆ ಭಾರಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ತಗುಲಿರುವುದರಿಂದ ಬೆಂಕಿ ನಂದಿಸಲು ಕಷ್ಟವಾಗಿದೆ.ಹೀಗಾಗಿ ನೋಡ ನೋಡುತ್ತಿರುವಂತೆ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.