ಸುದ್ದಿಬಿಂದು ನ್ಯೂಸ್ ಡೆಸ್ಕ್
ಶಿರಸಿ
: ಬಿಜೆಪಿ ಶಾಸಕರೊಬ್ಬರು ಇಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತನ್ನ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಗಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಎನ್ ವೈ ಗೋಪಾಲಕೃಷ್ಣ ಅವರು ಇಂದು ಶಿರಸಿಯಲ್ಲಿರುವ ವಿಧಾಸಭಾಧ್ಯಕ್ಷರಾಗಿರುವ ಕಾಗೇರಿಯವರಿಗೆ ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಎನ್ ವೈ ಗೋಪಾಲಕೃಷ್ಣ ಅವರು ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಮೊಳ್ಕಾಲ್ಮೂರು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು, ಆದರೆ ಬಳಿಕ ಅವರು ಬಳ್ಳಾರಿ ಜಿಲ್ಲೆಯ ಕೊಡ್ಲಗಿ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

ಈ ಬಾರಿ ಅವರು ಕಾಂಗ್ರೆಸ್ ಪಕ್ಷದಿಂದ ಮತ್ತೆ ತನ್ನ ಹಿಂದಿನ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೇಟ್ ಬಯಸಿದ್ದು, ಹೈಕಮಾಂಡ ಸಹ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಚುನಾವಣೆ ಹತ್ತಿರವಾಗುತ್ತಿರುವಂತೆ ಬಿಜೆಪಿಯ ಅನೇಕ ಶಾಸಕರು ರಾಜೀನಾಮೆ ನೀಡುತ್ತಿರುವುದು ಬಿಜೆಪಿಗೆ ದೊಡ್ಡ ಶಾಕ್ ಆಗಿದೆ‌. ಇನ್ನೂ ಮುಂದಿನ ದಿನದಲ್ಲಿ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.