ಸುದ್ದಿಬಿಂದು ಬ್ಯೂರೋ
ಸಿದ್ದಾಪುರ
:ಹಳಿಯಾಳ ದಿಂದ ಶಿರಸಿ ಮಾರ್ಗವಾಗಿ ಸಾಗರಕ್ಕೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ 16ನೇ ಮೈಲಕಲ್ ಬಳಿ ನಡೆದಿದೆ. ಬಸ್ ಪಟ್ಟಿಯಾದ ಪರಿಣಾಮ 16ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್ ನಲ್ಲಿ ಒಟ್ಟು 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಎಲ್ಲರೂ ಪ್ರಣಾಪಾಯದಿಂದ ಪಾರಾಗಿದ್ದಾರೆ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಬಸ್ ನ ಸ್ಟೇರಿಂಗ್ ಕಟ್ ಆಗಿ ಘಟನೆ ನಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಸಿದ್ದಾಪುರ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಗಾಯಾಳುವಿಗೆ ಚಿಕಿತ್ಸೆಗಾಗಿ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ