ಸುದ್ದಿಬಿಂದು ಬ್ಯೂರೋ
ಗದಗ:
ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು ದಾಖಲೆ ರಹಿತ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ನೀತಿ ಸಂಹಿತೆ ಜಾರಿಯಿಂದ ಕಳೆದ ಹಲವು ದಿನಗಳಿಂದ ವಿವಿಧೆಡೆ 18 ಚೆಕ್ ಪೋಸ್ಟ್ ಗಳನ್ನು ತೆರೆದು ನಿರಂತರವಾಗಿ ತಪಾಸಣೆ ಮಾಡಲಾಗುತ್ತಿದೆ.
ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ದಂಡಿನ ದುರ್ಗಮ್ಮ ದೇವಸ್ಥಾನದ ಹತ್ತಿರ ತೆರೆಯಲಾದ ಚೆಕ್ ಪೋಸ್ಟ್ ನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ 95 ಲಕ್ಷ ರೂ. ನಗದು ಪತ್ತೆಯಾಗಿದೆ.
ಪತ್ತೆಯಾದ ನಗದು ಬ್ಯಾಂಕಿಗೆ ಸಂಬಂಧಿಸಿದ್ದಾಗಿದೆಯೇ ಎಂಬುದರ ಕುರಿತು ಸ್ಥಳಕ್ಕೆ ಆಗಮಿಸಿದ ಆದಾಯ ತೆರಿಗೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಮತ್ತೊಂದಡೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ದುಂದೂರು ಚಾಕ್ ಪೋಸ್ಟ್ನಲ್ಲಿ 50 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸರಿಯಾದ ಕ್ರಮಗಳನ್ನು ಅನುಸರಿಸದೆ ನಗದು ಸಾಗಿಸುತ್ತಿರುವುದು ಕಂಡುಬಂದಿದ್ದರಿಂದ ಆದಾಯ ತೆರಿಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.