ಸುದ್ದಿಬಿಂದು ಬ್ಯೂರೋ
ಹೊನ್ನಾವರ : ಯಾವುದೋ ವಿಚಾರಕ್ಕೆ ಪತಿ ಹಾಗೂ ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬೈಲ್ ಗದ್ದೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ವೆಂಕ್ಟ ತಿಮ್ಮಪ್ಪ ನಾಯ್ಕ ಹಾಗೂ ಗೋಪಿ ನಾಯ್ಕ ಎಂಬುವವರೆ ಆತ್ಮಹತ್ಯೆ ಮಾಡಿಕೊಂಡಿದ್ದರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅಡಿಗೆ ಕೋಣೆಯ ಜಂತಿಗೆ ಇಬ್ಬರೂ ಒಟ್ಟಿಗೆ ಸೇರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಗ ಮನೆಯಿಂದ ಹೊರಗಡೆ ಹೋದ ಬಳಿಕ ಈ ಘಟನೆ ನಡೆದಿದೆ. ಆದರೆ ಇದುವರೆಗೆ ಪತಿ-ಪತ್ನಿ ನೇಣು ಬಿಗಿದುಕೊಂಡು ಆತ್ನಹತ್ಯೆ ಮಾಡಿಕೊಂಡಿರುವ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.