ಸುದ್ದಿಬಿಂದು ಬ್ಯೂರೋ
ಬೆಂಗಳೂರು : ಬಹುನಿರೀಕ್ಷವಾಗಿದ್ದ ಕಾಂಗ್ರೆಸ್ ನ ಎರಡನೆ ಪಟ್ಟಿ ಇಂದು ಬಿಡುಗಡೆಯಾಗೆ. ಮೊದಲ ಹಂತದಲ್ಲಿ 124ಅಭ್ಯರ್ಥಿಗಳ ಹೆಸರನ್ನ ಘೋಷಿಸಿದ್ದ ಕಾಂಗ್ರೆಸ್ ಇಂದು ಎರಡನೆ ಪಟ್ಟಿ ಹೊರಹಾಕಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರದಲ್ಲಿ .ಮೊದಲ ಹಂತದಲ್ಲಿ ಮೂರು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿತು. ಉಳಿದ ಮೂರು ಕ್ಷೇತ್ರದಲ್ಲಿ ಇಂದು ಎರಡು ಕ್ಷೇತ್ರದಲ್ಲಿನ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದೆ. ಶಿರಸಿ ಕ್ಷೇತ್ರದಿಂದ ಭೀಮಣ್ಣ ನಾಯ್ಕ , ಯಲ್ಲಾಪುರದಿಂದ ವಿ ಎಸ್ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇನ್ನೂ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು ಎನ್ನುವುದನ್ನ ಇನ್ನೂ ಬಿಡುಗಡೆ ಮಾಡಿಲ್ಲ..
ಕಳೆದ ಕೆಲ ದಿನಗಳಿಂದ ಸಭೆಗಳ ಮೇಲೆ ಸಭೆ ನಡೆಸಿದ ಕಾಂಗ್ರೇಸ್ ಇಂದು 42 ಕ್ಷೇತ್ರದಲ್ಲಿ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದು ಇನ್ನೂ ರಾಜ್ಯದ 58ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡದೆ ಬಾಕಿ ಉಳಿಸಿಕೊಂಡಿದೆ.

