ಸುದ್ದಿಬಿಂದು ಬ್ಯೂರೋ
ಕುಮಟಾ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಏಪ್ರೀಲ್ 12ರಂದು ಕುಮಟಾಕ್ಕೆ ಆಗಮಿಸಲಿದ್ದು, ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಪರ ಪ್ರಚಾರ ನಡೆಸಲಿದ್ದಾರೆ‌.

ಕುಮಟಾ ಪಟ್ಟಣದ ಮಣಕಿ ಮೈದಾನದಲ್ಲಿ ಜೆಡಿಎಸ್ ಸಮಾವೇಶ ಏರ್ಪಡಿಸಿಸಲಾಗಿದೆ‌. ಹೆಲಿಕಾಪ್ಟರ್ ಮೂಲಕ ಕುಮಟಾಕ್ಕೆ ಆಗಮಿಸಲಿರುವ ಕುಮಾರಸ್ವಾಮಿ ಅವರು ಮಣಕಿ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು.ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಗಿರುವ ಸೂರಜ್ ನಾಯ್ಕ ಸೋನಿ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸೇರಿ ಹಲವು ಮುಖಂಡರು ಆಗಮಿಸಲಿದ್ದಾರೆ.ಅಂದು ನಡೆಯುವ ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಆಗಮಿಸಲಿರುವ ಸಾಧ್ಯತೆ ಇದೆ‌. ಈಗಾಗಲೆ ಕುಮಟಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ಮೂಲಕ ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಪರ ಪ್ರಚಾರ ನಡೆಸಿ ಹೋಗಿದ್ದು, ಇದೀಗ ಎರಡನೇ ಬಾರಿಗೆ ಕುಮಟಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿರುವ ಸೂರಜ್ ಸೋನಿ ಪರ‌ಪ್ರಚಾರ ನಡೆಸಲಿದ್ದಾರೆ..