ಸುದ್ದಿಬಿಂದು ಬ್ಯೂರೋ
ಬೆಂಗಳೂರು : ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ನ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದ ಚೈತ್ರಾ ಕೋಠಾರಕರ್ ಟಿಕೆಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚೈತ್ರಾ ಕೋಠಾರಕರ್ ಅವರನ್ನ ಜೆಡಿಎಸ್ ಗೆ ಬರಮಾಡಿಕೊಂಡಿದ್ದಾರೆ.ಚೈತ್ರಾ ಕೋಠಾರಕರ್ ತಮ್ಮ ನೂರಾರು ಬೆಂಬಲಿಗರ ಜೊತೆ ಜೆಡಿಎಸ್ ಸೇರಿದ್ದಾರೆ.

ಇನ್ನೂ ಈ ಬಾರಿಯ ಚುನಾವಣೆಯಲ್ಲಿ ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಚೈತ್ರಾ ಕೋಠಾರಕರ್ ಅವರನ್ನ ಜೆಡಿಎಸ್ ಅಭ್ಯರ್ಥಿ ಎಂದು ಇದೆ ಸಂದರ್ಭದಲ್ಲಿ ಘೋಷಣೆ ಮಾಡಲಾಗಿದೆ..