ಸುದ್ದಿಬಿಂದು ಬ್ಯೂರೋ
ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಅಭ್ಯರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಆಕಾಶವಾಣಿ ಕೇಂದ್ರ ಬಳಿ ನಡೆದಿದೆ.
ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಗುರುಮಠಕಲ್ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿರುವ ಬಾಬುರಾವ್ ಚಿಂಚನಸೂರ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಇವರು ರಾತ್ರಿ ಪ್ರಚಾರವನ್ನ ಮುಗಿಸಿ ವಾಪಸ್ ಯಾದಗಿರಿಯಿಂದ ಕಲಬುರಗಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
ಅಪಘಾತದಲ್ಲಿ ಚಿಂಚನಸೂರ್ ಕಾಲು ಮತ್ತು ಮುಖಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ತಕ್ಷಣ ಸ್ಥಳೀಯರು ಗಾಯಗೊಂಡಿದ್ದ ಬಾಬುರಾವ್ ಚಿಂಚನಸೂರ್ ಅವರನ್ನ ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಅವರ ಕಾರ ಚಾಲಕ ಮತ್ತು ಗನ್‌ಮ್ಯಾನ್‌ಗೆ ಯಾವುದೇ ಗಾಯಗಳು ಆಗಿಲ್ಲ. ಅವರ ಕಾಲಿಗೆ ಗಂಭೀರ ಗಾಯವಾಗಿರುವ ಕಾರಣ ಇಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.