ಸುದ್ದಿಬಿಂದು ಬ್ಯೂರೋ

ಹಳಿಯಾಳ : ನನಗೆ ಕ್ಷೇತ್ರ ಇಲ್ಲ ಎಂದು ಟೀಕಿಸಿದ್ದ ಈಶ್ವರಪ್ಪನಿಗೆ ಟಿಕೆಟೆ ಸಿಗಲಿಲ್ಲ, ಈಗ ಈಶ್ವರಪ್ಪನಿಗೆ ಟಿಕೆಟೆ ಇಲ್ಲದಂತಾಗಿದೆ.ನನಗೆ ರಾಜ್ಯದ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವಂತೆ ಕರೆಯುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಆರ್.ವಿ ದೇಶಪಾಂಡೆ ಪರ ಪ್ರಚಾರಕ್ಕೆ ಆಗಮಿಸಿ ಮಾತನಾಡಿದ ಅವರು ಓರ್ವ ಹಿರಿಯ ಮಾಜಿ ಡಿಸಿಎಂ‌ ಆಗಿದ್ದ ಈಶ್ವರಪ್ಪನಿಗೆ ಪಕ್ಷ ಹೀಗೆ ಮಾಡಬಾರದಿತ್ತು,ಈಶ್ವರಪ್ಪ ಮಾತ್ರ ಅಲ್ಲ ಸವದಿ, ಶೆಟ್ಟರ್ ಜೊತೆ ನಡೆದುಕೊಂಡ ರೀತಿ ಸರಿಯಲ್ಲ, ಪಕ್ಷ ಕಟ್ಟಿದವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದರು.

ಇನ್ನು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಮಾತನಾಡಿಲ್ಲ,ಪಕ್ಷಕ್ಕೆ ಬಂದರೆ ನಾವು ಸ್ವಾಗತ ಮಾಡುತ್ತೇವೆ.ಇನ್ನು ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಬರುತ್ತಾರೆ.ನನ್ನನ್ನ ಕಟ್ಟಿಹಾಕಲು ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ ,ಇಂದೂ ಟಾರ್ಗೆಟ್ ಮಾಡಿದ್ದಾರೆ ನಾಳೆಯೂ ಟಾರ್ಗೆಟ್ ಮಾಡ್ತಾರೆ,ನನ್ನ ಕಂಡರೆ ಬಿಜೆಪಿಯವರಿಗೆ ಭಯ ಎಂದರು.ಶಿಗ್ಗಾವಿಯಲ್ಲಿ ವಿನಯ್ ಕುಲಕರ್ಣಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ದ ನಿಲ್ಲುವುದಿಲ್ಲ,ಅಲ್ಲಿ ಅಲ್ಪಸಂಖ್ಯಾತ ಕ್ಯಾಂಡಿಡೇಟ್ ನಿಲ್ತಾರೆ,ಇಂದು ಅಥವಾ ನಾಳೆ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ಇದಲ್ಲದೇ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಮೀಸಲಾತಿ ಪರಿಷ್ಕರಣೆ ಮಾಡಿದ್ದ ಬಿಜೆಪಿ ಸರ್ಕಾರದ ನಿರ್ಧಾರ ದೋಷಪೂರಿತವಾದುದ್ದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಕುರಿತು ಮಾತನಾಡಿದ ಅವರು ಮುಸ್ಲಿಂ ಮೀಸಲಾತಿ ರದ್ದು ಮಾಡಿರುವ ಕ್ರಮ ಒಳ್ಳೆಯದಲ್ಲ 1995ರಿಂದ ಅವರಿಗೆ ಮೀಸಲಾತಿ ಇತ್ತು ಬೇರೆಯವರಿಗೆ ಮೀಸಲಾತಿ ಹೆಚ್ಚಿಸಿದ್ದು ತಪ್ಪಿಲ್ಲ, ಆದರೆ ಮುಸ್ಲಿಂ ಅವರಿಗೆ ಯಾಕೆ ತೆಗೆಯಬೇಕಿತ್ತು,ಇದು ಸರಿಯಲ್ಲ,ಚುನಾವಣೆ ಸಂದರ್ಭದಲ್ಲಿ ಮತ ಪಡೆಯಲು ಹೀಗೆ ಮಾಡಿದರು.ಸುಪ್ರೀಂ ಕೋರ್ಟ್ ಯಾವ ತೀರ್ಪು ಕೊಡಲಿದೆ.