ಸುದ್ದಿಬಿಂದು ಬ್ಯೂರೋ
ಕುಮಟಾ : ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಭಿನ್ನಮತ ಬುಗಿಲೆದ್ದಿದ್ದು, ಕಿಸಾನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದ ಶಿವಾನಂದ ಹೆಗಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿವೇದಿತಾ ಆಳ್ವಾ ಅವರಿಗೆ ಕಾಂಗ್ರೆಸ್ ಟಿಕೇಟ್ ಘೋಷಣೆ ಮಾಡಲಾಗಿದ್ದು,. ನಿವೇದಿತಾವಆಳ್ವಾ ಅವರ ಹೆಸರು ಘೋಷಣೆ ಆಗಿದ್ದಕ್ಕೆ ಕುಮಟಾ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಿಸಾನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷ ಸಂಘಟನೆ ಮಾಡಿದವರನ್ನು ಕಡೆಗಣಿಸಿ, ಕ್ಷೇತ್ರದವರು ಅಲ್ಲದ ನಿವೇದಿತಾ ಆಳ್ವಾ ಅವರಿಗೆ ಪಕ್ಷ ಮಣೆ ಹಾಕಿರುವುದಕ್ಕೆ ಬೇಸರಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ. ಕಿಸಾನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸಚಿನ್ ಮೀಗಾ ಅವರಿಗೆ ಶಿವಾನಂದ ಹೆಗಡೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ಅಲ್ಲದೇ ತಮ್ಮ ಹಿತೈಷಿಗಳು, ಪಕ್ಷದ ಕಾರ್ಯಕರ್ತರ ಸಭೆ ನಡೆಸಿ ಕಾಂಗ್ರೇಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ..