ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲಿಂದ ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ
ರಾತ್ರಿ ವೇಳೆ ಆಗಿದ್ದರಿಂದ ಜನದಟ್ಟಣೆ ಕಡಿಮೆ ಇರುವ ಕಾರಣಕ್ಕೆ ಇಬ್ಬರು ಸೇತುವೆ ಮೇಲಿಂದ ನದಿಗೆ ಹಾರಿದ್ದಾರೆ. ಇಬ್ಬರು ಪ್ರೇಮಿಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಯುವತಿಯ ಶವವು ಶರಾವತಿ ನದಿಗೆ ಹೊಂದಿಕೊಂಡಿರುವಟೊಂಕ ಸಮೀಪ ಮೃತ ದೇಹ ಸಿಕ್ಕಿದ್ದು, ಇನ್ನೊಬ್ಬರ ಪತ್ತೆ ಕಾರ್ಯ ಮುಂದುವರೆದಿದೆ. ಸೇತುವೆ ಪಕ್ಕ ಇಬ್ಬರ ಚಪ್ಪಲಿ ಹಾಗೂ ಬ್ಯಾಗ್, ಬಸ್ ಪ್ರಯಾಣದ ಟಿಕೇಟ್ ಪತ್ತೆ ಆಗಿವೆ.
ಶರಾವತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದವರ ಹುಡುಕಾಟ ನಡೆಸಿದ್ದು, ಯುವತಿಯ ಶವ ಪತ್ತೆಯಾಗಿದ್ದು ನದಿಯಿಂದ ಹೊರ ತೆಗೆಯಲಾಗಿದೆ. ಇನ್ನೊಬ್ಬರ ಹುಡುಕಾಟ ನಡೆದಿದೆ. ಸೇತುವೆ ಬಳಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಇನ್ನೊಂದು ಶವದ ಪತ್ತೆ ನಡೆಯುತ್ತಿದೆ. ಸ್ಥಳಕ್ಕೆ ಹೊನ್ನಾವರ ಸಿ.ಪಿ.ಐ. ಮಂಜುನಾಥ ಇ.ಓ, ಪಿಎಸೈ ಪ್ರವೀಣಕುಮಾರ, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಚರಣೆ ಮುಂದುವರೆಸಿದ್ದಾರೆ