ಸುದ್ದಿಬಿಂದು ಬ್ಯೂರೋ
ಕಾರವಾರ
: ರಾಜ್ಯ ವಿಧಾನಸಭಾ ಚುನಾವಣಾ ಕಣ‌ ರಂಗೇರುತ್ತಿದ್ದು, ಪಕ್ಷ ಸೇರ್ಪಡೆ ಸಹ ಜೋರಾಗಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಈಗ ಕಾಂಗ್ರೆಸ್ ಸೇರ್ಪಡೆ ಪರ್ವ ಮುಂದುವರೆದಿದೆ.

ಬಿಜೆಪಿಯ ಎಂ ಎಲ್ ಸಿ ಗಣಪತಿ ಉಳ್ವೇಕರ್ ಸಹೋದರ ಕಾರವಾರ ನಗರಸಭೆಯ ನಾಮನಿರ್ದೇಶಿತ ಸದಸ್ಯ ಗುರುನಾಥ್ ಉಳ್ವೇಕರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದಾರೆ. ನಗರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಅವರ ನಿವಾಸದ ಬಳಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಗೆ ಸೇರ್ಪಡೆ ಗೊಂಡಿದ್ದಾರೆ.

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ ಸೈಲ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ,‌ಮೀನುಗಾರ ಮುಖಂಡ ರಾಜುತಾಂಡೇಲ್ ಗುರುನಾಥ್ ಉಳ್ವೇಕರ್ ಅವರನ್ನ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡರು..