ಸುದ್ದಿಬಿಂದು ಬ್ಯೂರೋ
ಕುಮಟಾ
: ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಅವರು ಇಂದು ಬಿಜೆಪಿಯಿಂದ ಎರಡನೇ ಬಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರೊಡನೆ ಮಹಾಸತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ದಿನಕರ ಶೆಟ್ಟಿಯವರು, ಕುಮಟಾ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡರು. ನಂತರ ಪಕ್ಷದ ಕಾರ್ಯಾಲಯದಿಂದ ನೂರಾರು ಕಾರ್ಯಕರ್ತರೊಡನೆ ಮೆರವಣಿಗೆಯಲ್ಲಿ ತೆರಳಿ ಸಹಾಯಕ ಆಯುಕ್ತರ ಕಚೇರಿಯ ಸಮೀಪದ ವರೆಗೆ ಸಾಗಿ ನಾಮಪತ್ರ ಸಲ್ಲಿಸಿದರು. 

ಈ ವೇಳೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿರಿಯ ಮುಖಂಡ ವಿನೋದ ಪ್ರಭು, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಗೋವಾ ರಾಜ್ಯದ ವಾಸ್ಕೋ ಶಾಸಕ ದಾಜಿ ಸಾಲ್ಕರ, ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾ ಸಹಸಂಚಾಲಕ ಪ್ರಮೋದ ಹೆಗಡೆ, ಕುಮಟಾ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಹೊನ್ನಾವರ ಮಂಡಲಾಧ್ಯಕ್ಷ ರಾಜು ಭಂಡಾರಿ, ಹಾಲಕ್ಕಿ ಒಕ್ಕಲಿಗ ಸಮಾಜದ ಜಿಲ್ಲಾಧ್ಯಕ್ಷ ಗೋವಿಂದ ಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ, ಕಾರ್ಯದರ್ಶಿ ಪ್ರಶಾಂತ ನಾಯಕ, ಜಿಲ್ಲೆ ಹಾಗೂ ಮಂಡಲದ ವಿವಿಧ ಸ್ಥರಗಳ ಪದಾಧಿಕಾರಿಗಳು, ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.