ಸುದ್ದಿಬಿಂದು ಬ್ಯೂರೋ….
ಕಾರವಾರ :
ಕಾರವಾರ ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕಿ ರೂಪಾಲಿ ನಾಯ್ಕ ಅವರು ಇಂದು ಸಾವಿರಾರೂ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು.

ನಗರದ ಮಾಲಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ರೂಪಾಲಿ ನಾಯ್ಕ ಅವರು ಸಾವಿರಾರು ಸಂಖ್ಯೆಯ ಕಾರ್ಯಕರ್ತರ ಹರ್ಷೋದ್ಗಾರಗಳ ನಡುವೆ ಮೆರವಣಿಗೆಯಲ್ಲಿ ನಗರಸಭೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು

ಈ ವೇಳೆ ಗೋವಾ ಮುಖ್ಯ ಮಂತ್ರಿ ಪ್ರಮೋದ ಸಾವಂತ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವಿಕರ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದರು..