ಸುದ್ದಿಬಿಂದು ಬ್ಯೂರೋ
ಕಾರವಾರ : ಪ್ರಧಾನಮಂತ್ರಿ ನರೇಂದ್ರ ಮೋದಿ ಸದ್ಯದಲ್ಲೇ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.
ಏ.30ರಿಂದ ಮೇ 3 ರ ಒಳಗಡೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಅವರ ಸಭೆಗಾಗಿ ಕಾರವಾರ ಹಾಗೂ ಅಂಕೋಲಾ ನಡುವಣ ಹಟ್ಟಿಕೇರಿ ಟೋಲ್ ಸಮೀಪದಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಲಾಗಿದೆ.
ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯ್ಕ, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಪಕ್ಷದ ರಾಜ್ಯ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಮತ್ತಿತರರು ಸ್ಥಳ ಪರಿಶೀಲನೆ ಸಂದರ್ಭದಲ್ಲಿ