ಸುದ್ದಿಬಿಂದು ಬ್ಯೂರೋ
ಕಾರವಾರ : ರಾಜ್ಯವಿಧಾನಸಭಾ ಚುನಾವಣಾ ರಣಕಣ ರಂಗೇರುತ್ತಿದ್ದು,ಅಭ್ಯರ್ಥಿಳಿಂದ ಅಬ್ಬರದ ಪ್ರಚಾರ ಜೋರಾಗಿದೆ. ಸತಾಯ ಗತಾಯ ಕರ್ನಾಟದಲ್ಲಿ ಮತ್ತೆ ಅಧಿಕಾರ ಹಿಡಿಯಬೇಕು ಎಂದಿರುವ ಬಿಜೆಪಿ ರಣತಂತ್ತವನ್ನ ರೂಪಿಸುತ್ತಿದ್ದು, ಮೇ 3ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರವಾರಕ್ಕೆ ಆಗಮಿಸಿ ಕರಾವಳಿ ಜಿಲ್ಲೆಯ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.
ನರೇಂದ್ರ ಮೋದಿ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ನೌಕಾನೆಲೆ ಸುಪರ್ದಿಯಲ್ಲಿರುವ ಜಾಗದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಸುವ ಸಾಧ್ಯತೆ ಇದೆ. ಈಗಾಗಲೆ ಈ ಸ್ಥಳವನ್ನ ಸಹ ಪರಿಶೀಲನೆ ನಡೆಸಲಾಗಿದ್ದು, ಸ್ಥಳ ಮಾತ್ರ ಫೈನಲ್ ಆಗುವುದು ಬಾಕಿ ಇದೆ.
ಮೇ 3ರಂದು ಗುಲಬರ್ಗಾ ಜಿಲ್ಲೆಯಲ್ಲಿ ರೋಡ್ ಶೋ, ಹಾಗೂ ಸಮಾವೇಶವನ್ನ ಮುಗಿಸಿ ಬಳಿಕ ಅಲ್ಲಿಂದ ಒಂದು ಗಂಟೆಗೆ ಅಂಕೋಲಾದ ಹಟ್ಟಿಕೇರಿಯಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದುಬಂದಿದೆ.ಈ ಬಗ್ಗೆ ಜಿಲ್ಲೆಯ ಎಲ್ಲಾ ಬಿಜೆಪಿ ಅಭ್ಯರ್ಥಿಗಳು ತಯಾರಿ ನಡೆಸುತ್ತಾರೆ..