ಸುದ್ದಿಬಿಂದು ಬ್ಯೂರೋ
ಕಾರವಾರ :
ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ರಣಕಣ ರಂಗೇರುತ್ತಿದ್ದು, ಮೋದಿ ಪ್ರಚಾರದ ಬಳಿಕ ಕಾಂಗ್ರೆಸ್ ನಾಯಕಿ ಪ್ರೀಯಾಂಕ ಗಾಂಧಿ ಜಿಲ್ಲೆಗೆ ಆಗಮಿಸಲ್ಲಿದ್ದಾರೆ ಎನ್ನುವ ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಇದೆ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ‌ಮೋದಿ ಆಗಮಿಸಲಿದ್ದು, ಇದಾದ ಬಳಿಕ ಕಾಂಗ್ರೆಸ್ ನ ನಾಯಕಿ ಕೂಡ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದ್ದು, ಎರಡು ದಿನಗಳ‌ ಕಾಲ ಜಿಲ್ಲೆಯಲ್ಲಿ ಉಳಿದು‌ ಕಾಂಗ್ರೆಸ್ ಅಭ್ಯರ್ಥಿಗಳ ಪರ ರೋಡ್ ಶೋ ಹಾಗೂ ಬಹಿರಂಗ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

ಅದರಲ್ಲೂ ಪ್ರಮುಖವಾಗಿ ನಿವೇದಿತ್ ಆಳ್ವಾ ಪರ ಅವರು ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಒಂದು ದಿನ ಪೂರ್ತಿ ಇದ್ದು ಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುಮಟಾ ಕ್ಷೇತ್ರ ಅಷ್ಟೆ ಅಲ್ಲದೆ ಹಳಿಯಾಳ ಹಾಗೂ ಶಿರಸಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳುವ ಸಾದ್ಯತೆ ಇದೆ ಎನ್ನಲಾಗಿದೆ. ಈ ಬಾರಿ ಹಾಗಾದರೂ ಮಾಡಿ ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಹೆಚ್ಚಿನ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲೇ ಬೇಕು ಎನ್ನುವ ರಣತಂತ್ರ ರೂಪಿಸುತ್ತಿರೋದು ಮಾತ್ರ ಸತ್ಯ.