ಸುದ್ದಿಬಿಂದು ಬ್ಯೂರೋ
ಯಲ್ಲಾಪುರ
: ಖಾಸಗಿ ಬಸ್ ಹಾಗೂ ಇನೋವಾ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಆರತಿಭೈಲ್ ಕ್ರಾಸ್ ಬಳಿ ನಡೆದಿದೆ.

ಯಲ್ಲಾಪುರ ಕಡೆಯಿಂದ ಗೋಕರ್ಣ ಪ್ರವಾಸಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಮಂಗಳೂರಿನಿಂದ ಮುಂಬೈ ಕಡೆ ಚಲಿಸುತ್ತಿದ್ದ ಇನೋವಾ ನಡುವೆ ಅಪಘಾತವಾಗಿದೆ. ಅಪಘಾದಿಂದಾಗಿ ಖಾಸಗಿ ಬಸ್ ಹೆದ್ದಾರಿಯ ಪಕ್ಕದಲ್ಲಿ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. .ಮಹಾರಾಷ್ಟ್ರದಿಂದ 40ಕ್ಕೂ ಹೆಚ್ಚು ಪ್ರವಾಸಿಗರು ಖಾಸಗಿ ಬಸ್ ಮೂಲಕ ಗೋಕರ್ಣ,ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ಇನ್ನೂ ಇನ್ನೋವಾ ಕಾರನಲ್ಲಿದ್ದವರು ಮಂಗಳೂರಿನಿಂದ ಕುಟುಂಬ ಸಮೇತರಾಗಿ ಮುಂಬೈಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇನ್ನೋವಾ ಚಾಲಕನ‌ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇನ್ನೋವಾ ಕಾರನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.