ಸುದ್ದಿಬಿಂದು ಬ್ಯೂರೋ
ಕಾರವಾರ : ರಾಜ್ಯವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ಮತ ಏಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಬಿಜೆಪಿಗೆ ಮರ್ಮಾಘಾತ ಎದುರಾಗುವ ಸಾಧ್ಯತೆ ಇದ್ದು, ಯಲ್ಲಾಪುರ ಕ್ಷೇತ್ರ ಒಂದರಲ್ಲಿ ಬಿಜೆಪಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ.
ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಐದು ಕ್ಷೇತ್ರದಲ್ಲಿ ಒಂದು ಕಾಂಗ್ರೆಸ್ ಗೆದ್ದುಕೊಂಡಿದ್ದರೆ ಉಳಿದ ಐದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಎಲ್ಲಾ ಉಲ್ಟಾ ಆಗು ಸಾದ್ಯತೆ ಇದೆ ಎನ್ನಲಾಗುತ್ತಿದೆ. ಭಟ್ಕಳ, ಕಾರವಾರ, ಹಳಿಯಾಳ, ಶಿರಸಿ ಈ ನಾಲ್ಕು ಕ್ಷೇತ್ರ ಕಾಂಗ್ರೆಸ್ ಪಾಲಾದರೆ ಅಚ್ಚರಿ ಪಡಬೇಕಾಗಿಲ್ಲ. ಯಲ್ಲಾಪುರ ಕ್ಷೇತ್ರದ ಹಾಲಿ ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಅವರಿಗೆ ಮತ್ತೆ ಗೆಲುವು ಒಲಿಯುವ ಸಾಧ್ಯತೆ ಹೆಚ್ಚಾಗಿದ್ದು, ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಅವರ ಪರ ಕ್ಷೇತ್ರದ ಮತದಾರರು ಒಲವು ತೋರಿಸಿದ್ದು, ಚುನಾವಣಾ ನಂತರದ ಸಮೀಕ್ಷೇಯಲ್ಲಿ ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ ಎನ್ನಲಾಗಿದೆ.
ಬಿಜೆಪಿಗೆ ಆಡಳಿತ ವಿರೋಧ ಹಾಗೂ ಬೆಲೆ ಏರಿಕೆ ಬಿಸಿಯಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಇದರಿಂದಾಗಿ ಅಭ್ಯರ್ಥಿಗಳ ಪರ ವಿರೋಧ ಇರುವುದಕ್ಕಿಂತ ಹೆಚ್ಚಾಗಿ ಬೆಲೆ ಏರಿಕೆ, ಆಡಳಿತ ವಿರೋಧ ಅಲೆ ದೊಡ್ಡ ಮಟ್ಟದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಹಿನ್ಬಡೆ ಉಂಟಾಗುವ ಸಾಧ್ಯತೆ ಇದೆ.ಇನ್ನೂ ಕೆಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರ ವರ್ಥನೆಗೆ ಬೇಸತ್ತ ಮತದಾರ ಬಿಜೆಪಿ ವಿರುದ್ಧ ಮತ ಚಲಾವಣೆ ಮಾಡಲಾಗಿದೆ ಎನ್ನುವ ಚರ್ಚೆಗಳು ಸಹ ಕೇಳಿ ಬರುತ್ತಿದೆ.
ಒಟ್ಟಿನಲ್ಲಿ ಈ ಬಾರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭಾರಿ ಹಿನ್ಬಡೆ ಉಂಟಾಗಲಿದೆ ಎನ್ನುವ ಚರ್ಚೆ ಜೋರಾಗಿದ್ದು, ಎಲ್ಲದಕ್ಕೂ ನಾಳೆಯ ಮತ ಏಣಿಕೆ ಬಳಿಕವೆ ಸ್ಪಷ್ಟ ಚಿತ್ರಣ ಹೊರಬರಲಿದ್ದು,ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೆ ಗೆಲುವು ಸಾಧಿಸಲಿದ್ದಾರೆ ಎನ್ನುವ ಬಗ್ಗೆ ಬೆಟ್ಟಿಂಗ್ ಜೋರಾಗಿದೆ ಎನ್ನಲಾಗುತ್ತಿದ್ದು, ಇದನ್ನ ನೋಡಿದ್ದರೆ ಮತದಾರರು ಕಾಂಗ್ರೆಸ್ ಪರ ಹೆಚ್ಚಿನ ಒಲವು ತೋರಿಸಿದ್ದಾರೆ ಎನ್ನುವುದು ಕಂಡು ಬರುತ್ತಿದೆ.