ಸುದ್ದಿಬಿಂದು ಬ್ಯೂರೋ
ಕಾರವಾರ : ಭಟ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನ ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಆಗ್ರಹ ಜೋರಾಗಿದೆ.
ಮಂಕಾಳು ವೈದ್ಯ ಅವರು ಕಾಂಗ್ರೆಸ್ ನಿಂದ ಎರಡನೇ ಬಾರಿ ಶಾಸಕರಾಗಿದ್ದಾರೆ. ಅಷ್ಟೆ ಅಲ್ಲದೆ ಮೀನುಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕರಾವಳಿ ಜಿಲ್ಲೆಯಲ್ಲಿ ಮಂಕಾಳು ವೈದ್ಯ ಅವರನ್ನ ಹೊರತು ಪಡಿಸಿದರೆ ಬೇರೆ ಯಾರೂ ಕೂಡ ಮೀನುಗಾರ ಸಮುದಾಯದಿಂದ ಆಯ್ಕೆ ಆಗಿಲ್ಲ. ಹೀಗಾಗಿ ಭಟ್ಕಳ ಕ್ಷೇತ್ರದಿಂದ ಆಯ್ಕೆ ಆಗಿರುವ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಅನೇಕರ ಆಗ್ರವಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಮೀನುಗಾರರೆ ಹೆಚ್ಚಾಗಿದ್ದು, ಅದರಲ್ಲಿ ಹೆಚ್ಚಿನವರು ಕಾಂಗ್ರೆಸ್ ನಲ್ಲಿಯೆ ಗುರುತಿಸಿಕೊಂಡು ಬಂದಿದ್ದಾರೆ.ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ ಮೀನುಗಾರರಿ ನ್ಯಾಯ ಸಿಗಬೇಕು, ಮತ್ತು ಮಂಕಾಳು ವೈದ್ಯಾ ಅವರು ಎಲ್ಲಾ ವರ್ಗದವರೊಂದಿಗೆ ಅನನ್ಯವಾಗಿದ್ದು, ಎಲ್ಲರೂ ಸಹ ಅವರನ್ನ ಮೆಚ್ಚಿಕೊಳ್ಳುತ್ತಾ ಬಂದಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ಕೊಟ್ಟರೆ ಎಲ್ಲಾ ವರ್ಗದವರಿಗೂ ಹೆಚ್ಚಿನ ಅನುಕೂಲವಾಗಲಿದೆ. ಈ ಕಾರಣಕ್ಕಾಗಿ ಮಂಕಾಳು ವೈದ್ಯ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎನ್ನುವುದು ಅನೇಕರ ಆಗ್ರಹವಾಗಿದೆ.