ಸುದ್ದಿಬಿಂದು ಬ್ಯೂರೋ
ಹೊನ್ನಾವರ
: ಚಲಿಸುತ್ತಿದ್ದ ಪ್ಯಾಸೆಂಜರ್ ಟೆಂಪೋ ಒಂದರ ಟೈಯರ್ ಬ್ಲಾಸ್ಟ್ ಆಗಿ ಟೊಂಪೋ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗೇರುಸೊಪ್ಪ ಸಮೀಪ‌ ನಡೆದಿದೆ.

ಗೇರುಸೊಪ್ಪ ಕಡೆಯಿಂದ ಹೊನ್ನಾವರ ಕಡೆ ಬರುತ್ತಿದ್ದ ಸಮಯದಲ್ಲಿ ಟೆಂಪೋ ಟೈಯರ್ ಬ್ಲಾಸ್ಟ್ ಆಗಿದಿದ್ದು, ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಪಲ್ಟಿಯಾಗಿದೆ. ಇದರಿಂದಾಗಿ ಟೆಂಪೋದಲ್ಲಿದ್ದ ಹತ್ತಕ್ಕೂ ಹೆಚ್ಷು ಮಂದಿ ಗಾಯಗೊಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಗಾಯಗೊಂಡ ಎಲ್ಲರನ್ನು ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹೊನ್ನಾವರ ಠಾಣಾ ಪಿಎಸ್ಐ ಪ್ರವೀಣಕುಮಾರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಬಗ್ಗೆ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.