ಸುದ್ದಿಬಿಂದು ಬ್ಯೂರೋ
ಭಟ್ಕಳ :
ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರ ನಡುವೆ ಅಪಘಾತ ಸಂಬಂಧಿಸಿ ಕಾರನಲ್ಲಿ ಇದ್ದ ಗುತ್ತಿಗೆದಾರರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರನಲ್ಲಿದಲ್ಲಿದ್ದ ಗುತ್ತಿಗೆದಾರ ಮೋಹನ್ ನಾಯ್ಕ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ನಡೆದಿದೆ.ಖಾಸಗಿ ಬಸ್ ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಈ ಖಾಸಗಿ ಬಸ್ ನಲ್ಲಿ ಸುಮಾರು 36ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮಂಕಿ ಸಮೀಪ ಬಸ್ ಚಾಲಕ ಕಾರ ಒಂದಕ್ಕೆ ಡಿಕ್ಕಿ ಹೊಡೆದು ನಿಯಂತ್ರ ತಪ್ಪಿದ್ದರಿಂದ ಬಸ್ ಹೆದ್ದಾರಿ ಪಕ್ಕದಲ್ಲಿ ಪಲ್ಟಿ ಆಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.