ಸುದ್ದಿಬಿಂದು ಬ್ಯೂರೋ
ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿಯಲ್ಲಿ ಮೊದಲ ಹಂತದಲ್ಲಿ ಒಂದು ಗ್ಯಾರಂಟಿ ಜಾರಿಗೆ ತರಲು ತೀರ್ಮಾನಿಸಿದ್ದು, ಮಹಿಳೆಯರಿಗೆ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಯಾವುದೆ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಜೂನ್ 01ರಂದು ನಡೆಯುವ ಸಚಿವ ಸಂಪುಟದಲ್ಲಿ ಇದು ಜಾರಿಯಾಗುವ ಸಾಧ್ಯತೆ ಇದೆ.
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಸುಧೀರ್ಘ ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್, ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದಿದ್ದಾರೆ.