ಬೆಂಗಳೂರು : ರಾಜ್ಯದ ಮಹಿಳೆಯರಿಗಾಗಿ ಕಾಂಗ್ರೆಸ್ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಯೋಜನೆ ಲಾಭವನ್ನು ಪಡೆಯಲು ಜುಲೈ 15ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಒಡತಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯ ನೀಡಲಾಗುತ್ತದೆ. ಮನೆಯಲ್ಲಿ ಎಷ್ಟೇ ಜನ ಮಹಿಳೆಯರಿದ್ದರೂ ಕೂಡ ಮನೆಯ ಓರ್ವ ಮಹಿಳೆಗೆ ಈ ಯೋಜನೆಯ ಲಾಭದೊರೆಯಲಿದೆ. ಈ ಪೈಕಿ ಒಂದು ಮನೆಯಿಂದ ಒಬ್ಬರು ಮಾತ್ರವೇ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರು ಕೂಡ ಈ ಯೋಜನೆಯ ಅಡಿಯಲ್ಲಿ ಲಾಭವನ್ನು ಪಡೆಯಲು ಅರ್ಹರಾಗಿದ್ದಾರೆ.
ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆಯನ್ನು ಮಾಡಿದ್ದಾರೆ. ಅಗಷ್ಟ 15ರಂದು ಮಹಿಳೆಯರು ಈ ಯೋಜನೆ ಲಾಭವನ್ನು ಪಡೆಯಲಿದ್ದಾರೆ. ಪಿಂಚಣಿ ಯೋಜನೆಯ ಲಾಭ ಪಡೆಯುತ್ತಿರುವ ಫಲಾನುಭವಿಗಳು ಕೂಡ ಈ ಯೋಜನೆಯ ಲಾಭ ಪಡೆಯಲಿದ್ದಾರೆ.
ಆದರೆ ಮನೆಯಲ್ಲಿ ಅತ್ತೆಗೋ ಇಲ್ಲ ಸೊಸೆಗೋ ಎನ್ನುವ ಗೊಂದಲಕ್ಕೆ ಸಿ ಎಂ ಸಿದ್ದರಾಮಯ್ಯ ಅವರು ತೆರೆ ಎಳೆದಿದ್ದು, ಮನೆಯ ಯಜಮಾನಿ ಯಾರು ಅನ್ನೋದನ್ನು ಮನೆಯವರೇ ತೀರ್ಮಾನ ಮಾಡಬೇಕು. ಮನೆಯಿಂದ ಒಬ್ಬರೇ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.