ಸುದ್ದಿಬಿಂದು ಬ್ಯೂರೋ
ಕಾರವಾರ
: ಕರಾವಳಿ ಉಂಟಾಗಲಿರುವ ಹವಮಾನ ವೈಪರಿತ್ಯದಿಂದಾಗಿ ಜೂ 6ರಿಂದ 11ರ ವರಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬೀ ಸಮುದ್ರದಲ್ಲಿ ವಾಯುವ ಭಾರ ಕುಸಿತವಾಗಲಿದ್ದು, ಇದರಿಂದಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇನ್ನೂ ಅರಬ್ಬೀ ಸಮುದ್ರದಲ್ಲಿ ಸಹ ಸಮುದ್ರ ಅಲೆ ಭಾರೀ ಪ್ರಮಾಣದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ.ಈ ಹಿನ್ನಲೆಯಲ್ಲಿ ಹವಮಾನ ಇಲಾಖೆ ನೀಡಿರುವ ಈ ದಿನಗಳಲ್ಲಿ ಯಾವುದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನೂ ಸಮುದ್ರ ತೀರಕ್ಕೆ ಪ್ರವಾಸಕ್ಕೆ ಬರುವವರಿಗೂ ಸಹ ಎಚ್ಚರಿಕೆ ನೀಡಲಾಗಿದ್ದು,ಕಡಲತೀರದಲ್ಲಿ ಪ್ರವಾಸಕ್ಕೆ ಬರುವವರು ಯಾವುದೇ ಕಾರಣಕ್ಕೂ ಮೋಜು ಮಸ್ತಿಗಾಗಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಜಿಲ್ಲೆಯ ಪ್ರತಿಯೊಂದು ತಾಲೂಕಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೇಂದ್ರವನ್ನ ಕೂಡ ಈಗಾಗಲೆ ತೆರೆಯಲಾಗಿದೆ. ಪ್ರತಿಯೊಂದು ನಿರ್ವಹಣಾ ಕೇಂದ್ರದ ಸಹಾಯವಾಣಿ ನಂಬರ್ ಈ ಕೆಳಗಿದೆ.