ಸುದ್ದಿಬಿಂದು ಬ್ಯೂರೋ
ಕಾರವಾರ
: ಬೀಪರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಜೂನ್ 11ರ ತನಕ ಸಮುದ್ರಕ್ಕೆ ಇಳಿಯದಂತೆ ಮೀನುಗಾರಿಕಾ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಅರಬ್ಬೀ ಸಮುದ್ರದಲ್ಲಿ ಬೀಪರ್ ಜಾಯ್ ಚಂಡಮಾರದಿಂದಾಗಿ ಕ್ಷಣಕ್ಷಣಕ್ಕೂ ಅಲೆಯ ಅಬ್ಬರ ಜೋರಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಸಹ ಇದು ಮುಂದುವರೆಯುವ ಸಾಧ್ಯತೆ ಇದೆ ಎಂದು ಈಗಾಗಲೆ ಹವಮಾನ ಇಲಾಖೆ ಮಾಹಿತಿ ನೀಡಿದೆ.ಹೀಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಆ ಕಾರಣಕ್ಕೆ ಕಡಲತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಮುದ್ರದಲ್ಲಿ ಯಾವುದೇ ಕಾರಣಕ್ಕೂ ಮೀನುಗಾರಿಕೆ ನಡೆದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಇನ್ನೂ ಜಿಲ್ಲೆಯ ಕಡಲತೀರವನ್ನ ನೋಡಬೇಕು ಎಂದು ಬರುವ ಪ್ರವಾಸಿಗರು ಸಹ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಈ ಚಂಡಮಾರುತ ಗಂಟೆಗೆ 55-60ಕಿ.ಲೋ ಮೀಟರ್ ವೇಗದಲ್ಲಿ ಗಾಳಿ ಬಿಸಲಿದೆ ಎಂದು ಹವಮಾನ ಇಲಾಖೆ ಮಾತಿಹಿ ‌ನೀಡಿದೆ.