ಸುದ್ದಿಬಿಂದು ಬ್ಯೂರೋ
ಬೆಂಗಳೂರು : ಚುನಾವಣಾ ಪುರ್ವದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳ ಪೈಕಿ ಮೊದಲ ಯೋಜನೆಯಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವ ಮೂಲಕ ಮೊದಲ ಗ್ಯಾರಂಟಿ ಜಾರಿ ಮಾಡಲಿದ್ದು, ಮಧ್ಯಾಹ್ನ 1ಗಂಟೆ ಬಳಿಕ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸ ಬಹುದಾಗಿದೆ.
ಕರ್ನಾಟದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗಾಗಿ ಜಾರಿಗೊಳ್ಳುತ್ತಿರುವುದು ಗಮನಾರ್ಹ. ರಾಜ್ಯಾದ್ಯಂತ ಏಕಕಾಲಕ್ಕೆ ಉದ್ಘಾಟನೆ- ಮಹಿಳಾ ಸಬಲೀಕರಣಕ್ಕೆ ಹೊಸ ಮುನ್ನುಡಿಯಾಗಲಿದೆ.
ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಶಕ್ತಿ’ ಯೋಜನೆಗೆ ಚಾಲನೆ ನೀಡುವ ಮೂಲಕ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಗೆ ಮುನ್ನುಡಿ ಬರೆಯಲಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವವ್ಯಾಪ್ತಿಯಲ್ಲಿ ಶಾಸಕರು ಈ ಯೋಜನೆಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಮಹಿಳಾ ಪ್ರಯಾಣಿಕರಿಗೆ ಈ ಸೌಲಭ್ಯ ದೊರೆಯಲಿದೆ. 41.8 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ.
ಉಚಿತ ಪ್ರಯಾಣ’ ಯೋಜನೆಯು ಪ್ರತಿದಿನ 41.8 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಅನುಕೂಲವಾಗಲಿದೆ. ಬಡ ಮತ್ತು ಕೆಳ ಮಧ್ಯಮ ವರ್ಗದ ದುಡಿಯುವ ಮಹಿಳೆಯರ ದಿನದ ಖರ್ಚಿನ ಹೊರೆಯನ್ನು ಇಳಿಸಿ, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಹೊಸ ಭಾಷ್ಯ ಬರೆಯಿದೆ. ಉಳಿತಾಯವಾಗುವ ಪ್ರಯಾಣದ ವೆಚ್ಚ ಕುಟುಂಬದ ನಿರ್ವಹಣೆಗೆ ಬಳಕೆಯಾಗುವುದರಿಂದ ಮಹಿಳೆಯರಲ್ಲಿ ಸ್ವಾವಲಂಬನೆಯ ಭಾವ ಮೂಡಿಸಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೂ ‘ಶಕ್ತಿ’
ಜಾತಿ, ಮತ, ವರ್ಗಗಳ ಭೇದವಿಲ್ಲದೆ ವಿದ್ಯಾರ್ಥಿನಿಯೂ ಸೇರಿದಂತೆ ಮಹಿಳೆಯರು ಸೌಲಭ್ಯ ಪಡೆಯಬಹುದಾಗಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಯೋಜನೆಯ ಅನುಕೂಲ ದೊರೆಯಲಿದೆ. ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದ್ದು, 18,609 ಬಸ್‌ಗಳ ಸೇವೆಯು ಉಚಿತ ಪ್ರಯಾಣಕ್ಕೆ ಲಭ್ಯವಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ಕೆ.ಎಸ್. ಆರ್.ಟಿ.ಸಿ, ಬಿಎಂಟಿಸಿ, ಎನ್.ಡಬ್ಲ್ಯು.ಕೆ.ಆರ್.ಟಿ.ಸಿ; ಹಾಗೂ ಎನ್.ಇ.ಕೆ.ಆರ್.ಟಿ.ಸಿ. ಬಸ್ ಗಳಲ್ಲಿ ಈ ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಗೆ ವಾರ್ಷಿಕವಾಗಿ 4051.56 ಕೋಟಿ ರೂ. ವೆಚ್ಚವಾಗುವುದು ಎಂದು ಅಂದಾಜಿಸಲಾಗಿದೆ.