ಸುದ್ದಿಬಿಂದು ಬ್ಯೂರೋ
ಯಲ್ಲಾಪುರ
: ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೇಲಂಗಾರ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (35) ಎಂಬಾತನೆ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾನೆ. ಈತ ಕೃಷಿ ಮಾಡಿಕೊಂಡಿದ್ದು, ಈತನ ಮದುವೆ ಮಾಡಲು ಮನೆಯವರು ಹೆಣ್ಣು ಹುಡುಕುತ್ತಿದ್ದರು ಎನ್ನಲಾಗಿದೆ. ಆದರೆ ಎಲ್ಲಿಯೂ ಹೆಣ್ಣು ಸಿಗದೆ ಇರುವುದಕ್ಕೆ ಆತನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌ ಎನ್ನಲಾಗಿದೆ.

ಮನೆಯ ಸಮೀಪದಲ್ಲಿರುವ ಅರಣ್ಯದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌