ಸುದ್ದಿಬಿಂದು ಬ್ಯೂರೋ
ಮಹಾರಾಷ್ಟ್ರ
: ಮುಂಬೈ ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್‌‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ.

ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ನ ಟೈರ್ ಬ್ಲಾಸ್ಟ್ ಆಗಿದ್ದು, ಆ ಬಳಿಕ ಬಸ್‌ ಪಲ್ಟಿಯಾಗಿದ ಪರಿಣಾಮವಾಗಿ ಬಸ್ ನಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಈ ಬಸ್ ನಲ್ಲಿ ಒಟ್ಟು 33ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿವ ಬಗ್ಗೆ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ 26 ಮಂದಿ ಸಜೀವ ದಹನವಾಗಿದ್ದಾರೆ. ಮುಂಜಾನೆ 2 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇನ್ನೂ 6-8 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿರುವ ಬಗ್ಗೆ ವರದಿಯಾಗಿದೆ. ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಅಲ್ಲಿನ ಸರಕಾರ ಘೋಷಣೆ ಮಾಡಿದೆ.
.