ಸುದ್ದಿಬಿಂದು ಬ್ಯೂರೋ
ಶಿರಸಿ
: ಆನ್‌ಲೈನ್ ಗೇಮ್ ಚಟಕ್ಕೆ ಒಳಗಾಗಿದ್ದ ಯುವಕನೋರ್ವ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಾಳೆತೋಟ ಎಂಬಲ್ಲಿ ನಡೆದಿದೆ.

ವಿಜೇತ ಶಾಂತಾರಾಮ ಹೆಗಡೆ (37)ಎಂಬಾತನೆ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಆತ ಮನೆ ಪಕ್ಕದ ಕುಳವೆ ಬೆಟ್ಟದಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾಗಿ ಸುಮಾರು 65ಲಕ್ಷ ರೂ. ಕಳೆದುಕೊಂಡಿದ್ದ ಎನ್ನಲಾಗಿದೆ. ಶುಕ್ರವಾರ ರಾತ್ರಿ ಬೆಂಗಳೂರಿಗೆ ಹೊಗುತ್ತೇನೆಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ಬೆಂಗಳೂರಿಗೆ ತೆರಳದೇ ಕುಳವೆ ಅರಣ್ಯ ಪ್ರದೇಶದಲ್ಲಿ ನೇಣಿಗೆ ಶರಣಾಗಿದ್ದಾನೆ.

ಕುಟುಂಬಸ್ಥರು ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ನೀಡಲು ಹೋಗಿದ್ದು, ಬಳಿಕ ಪೊಲೀಸರು ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿದಾಗ ಕುಳವೆ ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೇಟ್ ವರ್ಕ್ ಪತ್ತೆಯಾಗಿದ್ದು, ಬಳಿಕ ಅಲ್ಲಿಗೆ ತೆರಳಿ ಪರಿಶೀಲನೆ ‌ನಡೆಸಿದ ವೇಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವುದು ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.